
ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕ ರಾಜ್ಯದ ಪರವಾಗಿ ಪಾಲ್ಗೊಂಡ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಹಿಳಾ ಸಾಧಕರ ಪ್ರತೀಕವಾದ ಸೂಲಗಿತ್ತಿ ನರಸಮ್ಮ,ವೃಕ್ಷ ಮಾತೆ ತುಳಸಿ ಗೌಡ ಹಾಲಕ್ಕಿ ಹಾಗೂ ಸಾಲು ಮರದ ತಿಮ್ಮಕ್ಕರನ್ನೊಳಗೊಂಡ “ನಾರಿ ಶಕ್ತಿ” ಸ್ತಬ್ಧ ಚಿತ್ರ ನವದೆಹಲಿಯ ಕರ್ತವ್ಯ ಪಥದಲ್ಲಿ ಇಂದು ವಿಜೃಂಬಿಸಿತು.
ಕರ್ತವ್ಯ ಪಥ ಸತತವಾಗಿ ಹದಿನಾಲ್ಕು ವರ್ಷಗಳಿಂದ ಸ್ತಬ್ಧಚಿತ್ರದೊಂದಿಗೆ ಪಾಲ್ಗೊಂಡ ದೇಶದ ಏಕೈಕ ರಾಜ್ಯವೆಂಬ ಶ್ರೇಯವನ್ನು ಕರ್ನಾಟಕ ತನ್ನದಾಗಿಸಿಕೊಂಡಿದೆ. ಈ ಬಾರಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರವು ಕರ್ನಾಟಕ ರಾಜ್ಯದ ಪಾಲಿಗೆ ಅತ್ಯಂತ ಸ್ಮರಣೀಯವಾದುದಾಗಿದೆ.