ಜಿಲ್ಲಾ ಸುದ್ದಿರಾಜ್ಯ
ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ

ಬಾಗಲಕೋಟೆ : ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ನಡೆದ ರಾಜ್ಯಮಟ್ಟದ ಪದವಿ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ಬಾದಾಮಿಯ ಎಸ್.ಬಿ.ಮಮದಾಪೂರ ಮಹಾವಿದ್ಯಾಲಯದ ವಿದ್ಯಾರ್ಥಿ ಕುಮಾರೇಶ ಕಾತರಕಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಲ್ಹೋಟ್ ಅವರಿಂದ ಕುಮಾರೇಶ ಕಾತರಕಿ ಪ್ರಶಸ್ತಿ ಪತ್ರವನ್ನು ಪಡೆದುಕೊಂಡರು.
ಪ್ರಬಂಧ ಸ್ಪರ್ದೆಯಲ್ಲಿ ಪ್ರಥಮ ಸ್ಥಾನ ಪಡೆದ ಕುಮಾರೇಶ ಕಾತರಕಿಗೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ, ಜಿ.ಪಂ ಸಿಇಒ ಟಿ.ಭೂಬಾಲನ ಅಭಿನಂಧನೆ ಸಲ್ಲಿಸಿದ್ದಾರೆ.