ಗ್ರಾ.ಪಂ ತೆರವಾದ ಸ್ಥಾನಗಳಿಗೆ ಉಪ ಚುನಾವಣೆ
ಬಾಗಲಕೋಟೆ: ರಾಜ್ಯ ಚುನಾವಣಾ ಆಯೋಗವು ವಿವಿಧ ಕಾರಣಗಳಿಂದ ತೆರವಾಗಿರುವ ಸ್ಥಾನಗಳಿಗಳಿಗೆ ಉಪ ಚುನಾವಣೆ ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ಹೊರಡಿಸಿದೆ.
ಜಿಲ್ಲಾಧಿಕಾರಿಗಳು ಫೆಬ್ರವರಿ 8 ರಂದು ಉಪ ಚುನಾವಣೆಗೆ ಅಧಿಸೂಚನೆ ಹೊರಡಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಫೆ.14 ಆಗಿದ್ದು, ಫೆ.15 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಫೆ.17 ಕೊನೆಯ ದಿನವಾಗಿದೆ. ಮತದಾನ ಫೆ.25 ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ ನಡೆಯಲಿದೆ. ಮರು ಮತದಾನ ಅವಶ್ಯವಿದ್ದಲ್ಲಿ ಫೆ.27 ರಂದು ನಡೆಸಲಾಗುತ್ತಿದೆ. ಮತ ಎಣಿಕೆ ಫೆ.28 ರಂದು ನಡೆಯಲಿದೆ.
ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಫೆ.8 ರಿಂದ 28 ವರೆಗೆ ಜಾರಿಯಲ್ಲಿರುತ್ತದೆ. ಜಿಲ್ಲೆಯಲ್ಲಿ ಬಾದಾಮಿ ತಾಲೂಕಿನ ಕೆಂದೂರ ಗ್ರಾಮದಲ್ಲಿ 5 ಸ್ಥಾನ, ಹುನಗುಂದ ತಾಲೂಕಿನ ಕೂಡಲಸಂಗಮ, ಇಲಕಲ್ಲ ತಾಲೂಕಿನ ಹಿರೇಕೊಡಗಲಿ ಹಾಗೂ ಜಮಖಂಡಿ ತಾಲೂಕಿನ ಕಂಕಣವಾಡಿ ಗ್ರಾಮಗಳಲ್ಲಿ ತಲಾ ಒಂದು ಸ್ಥಾನ ಸೇರಿ ಒಟ್ಟು 4 ಗ್ರಾಮ ಪಂಚಾಯತಿಗಳ 8 ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ.