ಜಿಲ್ಲಾ ಸುದ್ದಿ
ಜೀತ ಪದ್ದತಿ ನಿರ್ಮೂಲನೆಗಾಗಿ ಜಿಲ್ಲೆಯ ಅಧಿಕಾರಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ..!

ಬಾಗಲಕೋಟೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ವತಿಯಿಂದ ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಅಂಗವಾಗಿ ಜಿ.ಪಂ ಸಭಾಭವನದಲ್ಲಿ ಗುರುವಾರ ಪ್ರತಿಜ್ಞಾವಿಧಿ ಭೋದಿಸಲಾಯಿತು.
- ಜಿಲ್ಲಾಧಿಕಾರಿ ಪಿ.ಸುನೀಲ್‍ಕುಮಾರ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಕರ್ನಾಟಕವನ್ನು ಜೀತ ವಿಮುಕ್ತಿಗೊಳಿಸಲು, ಸಂಕಷ್ಟದಲ್ಲಿರುವ ಸಮುದಾಯಗಳ ಜನರಿಗೆ ನ್ಯಾಯವನ್ನು ಒದಗಿಸಲು ನನ್ನ ಸೇವೆಯನ್ನು ಮುಡಿಪಾಗಿಸುತ್ತೇನೆ. ಈ ಮೂಲಕ ಸಮಾನತೆಯನ್ನು ಸಾಧಿಸಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ ಎಂದು ಭೋಧಿಸಲಾಯಿತು. ಈ ಸಂದರ್ಭದಲ್ಲಿ ಜೀತ ಪದ್ದತಿ ನಿರ್ಮೂಲನೆ ಕುರಿತ ಕಿರು ಚಿತ್ರ ಹಾಗೂ ಮೇ ಭಾರತ ಹೂ ವಿಡಿಯೋ ಹಾಡನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಜಿ.ಪಂ ಯೋಜನಾ ನಿರ್ದೇಶಕ ಸಿ.ಆರ್.ಮುಂಡರಗಿ ಸೇರಿದಂತೆ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಜಿ.ಪಂ ಸಹಾಯಕ ಯೋಜನಾಧಿಕಾರಿ ಭೀಮಪ್ಪ ತಳವಾರ ಪ್ರಾರಂಭದಲ್ಲಿ ಸ್ವಾಗತಿಸಿ ಕೊನೆಗೆ ವಂದಿಸಿದರು.