ಜಿಲ್ಲಾ ಸುದ್ದಿ
26ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಗಲಕೋಟೆ ಜಿಲ್ಲಾ ಪ್ರವಾಸ..!

ಬಾಗಲಕೋಟೆ: ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 26 ರಂದು ಬಾಗಲಕೋಟೆ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಅಂದು 10.30ಕ್ಕೆ ಹುಬ್ಬಳ್ಳಿಯಿಂದ ಹೆಲಿಕ್ಯಾಪ್ಟರ ಮೂಲಕ ಪ್ರಯಾಣ ಬೆಳೆಸಿ 11.10ಕ್ಕೆ ಬನಹಟ್ಟಿಗೆ ಆಗಮಿಸುವರು. 11.35ಕ್ಕೆ ಹಿಪ್ಪರಗಿ ಗ್ರಾಮದ ಸಂಗಮೇಶ್ವರ ದೇವಸ್ಥಾನಕ್ಕೆ ಭೇಟಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12.30ಕ್ಕೆ ಬನಹಟ್ಟಿ ಎಸ್.ಆರ್.ಎ ಮೈದಾನದಲ್ಲಿ ತೇರದಾಳ ವಿಧಾನ ಸಭಾಕ್ಷೇತ್ರದ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಹಾಗೂ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಿ ನಂತರ 3 ಗಂಟೆಗೆ ಬನಹಟ್ಟಿಯಿಂದ ಹೆಲಕ್ಯಾಪ್ಟರ ಮೂಲಕ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ.